ರಾಹುಲ್ ಗಾಂಧಿ ಆಪ್ತ ಜಿತಿನ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿರುವ ಯೋಗಿ ಆದಿತ್ಯನಾಥ್
ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.

ಲಖನೌ: ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಹ ಯೋಗಿ ಆದಿತ್ಯನಾಥ್ ಭೇಟಿ ಮಾಡಲಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಉತ್ತರ ಪ್ರದೇಶದ ಖ್ಯಾತ ಬ್ರಾಹ್ಮಣ ಕುಟುಂಬದ ಹಿನ್ನೆಲೆಯುಳ್ಳವರಾಗಿದ್ದು, ಕಾಂಗ್ರೆಸ್ ನಿಂದ ಜೂ.09 ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮುಂದಿನ ವರ್ಷದ ಪ್ರಾರಂಭದಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ದೃಷ್ಟಿಯಿಂದ ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಹಾಗೂ ಯೋಗಿ ಆದಿತ್ಯನಾಥ್ ಅವರ ಹೈಕಮಾಂಡ್ ಭೇಟಿ ಮಹತ್ವ ಪಡೆದುಕೊಂಡಿದೆ. ಇದಕ್ಕೂ ಮುನ್ನ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಚುನಾವಣೆ ತಯಾರಿಯ ಪರಿಶೀಲನೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು.
Related Article
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


