ಅಲ್ಪಸಂಖ್ಯಾತರು ಕುಟುಂಬ ಯೋಜನೆ ಅಳವಡಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಒತ್ತಾಯ!
ಜನಸಂಖ್ಯೆ ನಿಯಂತ್ರಣದಿಂದ ಬಡತನ ಕಡಿಮೆಮಾಡಲು ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿ ಅಳವಡಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.

ದಿಸ್ಪುರ: ಜನಸಂಖ್ಯೆ ನಿಯಂತ್ರಣದಿಂದ ಬಡತನ ಕಡಿಮೆಮಾಡಲು ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.
ಅಸ್ಸಾಂ ಸರ್ಕಾರಕ್ಕೆ 1 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜನಸಂಖ್ಯೆ ಹೆಚ್ಚಳದಿಂದಾಗಿ ಅಲ್ಪಸಂಖ್ಯಾತರಲ್ಲಿ ಬಡತನ ಹೆಚ್ಚಾಗಿದ್ದು, ಈ ಸಮುದಾಯದಲ್ಲಿನ ಬಡತನವನ್ನು ಕಡಿಮೆ ಮಾಡಲು ಸಮುದಾಯದ ಎಲ್ಲಾ ಪಾಲುದಾರರು ಮುಂದೆ ಬರಬೇಕು ಮತ್ತು ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರ ಎಲ್ಲಾ ಬಡ ಜನರ ಪೋಷಕ ಆದರೆ, ಬಡತನ, ಅನಕ್ಷರತೆ ಮತ್ತು ಸರಿಯಾದ ಕುಟುಂಬ ಯೋಜನೆಯ ಕೊರತೆಯ ಮೂಲ ಕಾರಣವಾಗಿರುವ ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೆಂಬಲ ಬೇಕು ಎಂದು ಅವರು ಹೇಳಿದರು.
ಸಮುದಾಯದ ಮಹಿಳೆಯರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ತಮ್ಮ ಸರ್ಕಾರ ಕೆಲಸ ಮಾಡುತ್ತದೆ ಇದರಿಂದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಶರ್ಮಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


