ಲಾಲೂ ಪ್ರಸಾದ್ ಯಾದವ್ ಪುತ್ರ- ಎನ್ ಡಿಎ ಮಿತ್ರ ಪಕ್ಷ ಭೇಟಿ: ಗರಿಗೆದರಿದ ಕುತೂಹಲ
ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ನನ್ನು ಎನ್ ಡಿಎ ಮಿತ್ರ ಪಕ್ಷದ ಜಿತನ್ ರಾಮ್ ಮಾಂಜಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ನನ್ನು ಎನ್ ಡಿಎ ಮಿತ್ರ ಪಕ್ಷದ ಜಿತನ್ ರಾಮ್ ಮಾಂಜಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಹಿಂದೂಸ್ತಾನ್ ಆವಾಮಿ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಜಿ ಅವರ ನಿವಾಸದಲ್ಲಿ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಜೊತೆ ರಹಸ್ಯ ಮಾತುಕತೆ ನಡೆದಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಲಾಲೂ ಪ್ರಸಾದ್ ಯಾದವ್ ಅವರಿಗೆ ಕರೆ ಮಾಡಿದ್ದ ಮಾಂಜಿ ಜನ್ಮ ದಿನದ ಶುಭಾಶಯ ಕೋರಿದ್ದರು.
ಮಾಂಜಿ ಅವರು ಎನ್ ಡಿಎ ಮೈತ್ರಿ ಕೂಟ ತೊರೆದು ಮಹಾಘಟಬಂದನ್ ಗೆ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ತಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುವುದಾಗಿ ಇತ್ತೀಚೆಗೆ ತೇಜ್ ಪ್ರತಾಪ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


