ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್‌ಐ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.
ಈ ವರ್ಷದ ಏಪ್ರಿಲ್‌ನಲ್ಲಿ ಕೊರೋನಾದ ಎರಡನೇ ಅಲೆ ಪ್ರಾರಂಭವಾದಾಗ ಎಲ್ಲಾ ಸ್ಮಾರಕಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು.
100 ವರ್ಷಕ್ಕಿಂತ ಹಳೆಯದಾದ ಸ್ಮಾರಕಗಳೂ ಸೇರಿದಂತೆ ಒಟ್ಟು 3,684 ಸ್ಮಾರಕಗಳು ಎಎಸ್‌ಐ ವ್ಯಾಪ್ತಿಯಲ್ಲಿದೆ.
ಉದಾಹರಣೆಗೆ ಉತ್ತರ ಪ್ರದೇಶದಲ್ಲಿ 741 ಸ್ಮಾರಕಗಳಿವೆ. ಅದರಲ್ಲಿ ವಿಶ್ವ ಪ್ರಸಿದ್ಧ ತಾಜ್ ಮಹಲ್ ಮತ್ತು ಆಗ್ರಾ ಕೋಟೆಗಳು ಸೇರಿದೆ. ಕರ್ನಾಟಕದ ಹಂಪಿ, ಬಾದಾಮಿ, ಪಟ್ಟದಕಲ್ಲುಗೋಳಗುಮ್ಮಟ ಸೇರಿ ಅನೇಕ ಐತಿಹಾಸಿಕ ಸ್ಮಾರಕಗಳು ಸಹ ಎಎಸ್‌ಐ ವ್ಯಾಪ್ತಿಗೆ ಬರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


