ವಿಶಾಖಪಟ್ಟಣಂನಲ್ಲಿ ಎನ್ಕೌಂಟರ್: ಡಿಸಿಎಂ ಕಮಾಂಡರ್ ಸೇರಿ 6 ನಕ್ಸಲರ ಹತ್ಯೆ
ನಕ್ಸರು ಮತ್ತು ನಕ್ಸಲ್ ನಿಗ್ರಹ ಪಡೆ ನಡುವಿನ ಎನ್ಕೌಂಟರ್ ವೇಳೆ ಆರು ಮಂದಿ ನಕ್ಸಲರು ಹತರಾಗಿದ್ದಾರೆ.

ವಿಶಾಖಪಟ್ಟಣಂ: ನಕ್ಸರು ಮತ್ತು ನಕ್ಸಲ್ ನಿಗ್ರಹ ಪಡೆ ನಡುವಿನ ಎನ್ಕೌಂಟರ್ ವೇಳೆ ಆರು ಮಂದಿ ನಕ್ಸಲರು ಹತರಾಗಿದ್ದಾರೆ.
ವಿಶಾಖಪಟ್ಟಣಂದ ಕೊಯ್ಯೂರ್ ಮಂಡಳ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಆರು ಮಂದಿ ನಕ್ಸಲರು ಮೃತಪಟ್ಟಿದ್ದಾರೆ. ಹತ್ಯೆಗೀಡಾದ ಮಾವೋವಾದಿಗಳಲ್ಲಿ ಓರ್ವ ತೆಲಂಗಾಣ ಮೂಲದ ಡಿಸಿಎಂ ಕಮಾಂಡರ್ ಎಂದು ಗುರುತಿಸಲಾಗಿದೆ ಎಂದು ಹೇಳಲಾಗಿದೆ.
ಮುಖಾಮುಖಿ ಗುಂಡಿನ ದಾಳಿ ಆರು ಮಾವೋವಾದಿಗಳು ಸಾವನ್ನಪ್ಪಿದ್ದರೆ. ಇನ್ನೂ ಕೆಲವರು ದಟ್ಟ ಅರಣ್ಯದೊಳಗೆ ಓಡಿಹೋದರು ಎಂದು ವರದಿಯಾಗಿದೆ.
ಪೊಲೀಸರು ಸ್ಥಳದಿಂದ ಎಕೆ 47, ಕೆಲವು ರಿವಾಲ್ವರ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನಾ ಪ್ರದೇಶದಲ್ಲಿ ಕೋಂಬಿಂಗ್ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲು ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ದೌಡಾಯಿಸಿದ್ದಾರೆ.
ದಟ್ಟವಾದ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನವನ್ನು ಪತ್ತೆಹಚ್ಚಲು ಪೊಲೀಸರು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


