ಆಲೋಪತಿ ಬಗ್ಗೆ ಅವಹೇಳನ: ಛತ್ತೀಸ್ ಗಡ ಪೊಲೀಸರಿಂದ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು
ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ರಾಯಪುರ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಗಳ ಅಡಿಯಲ್ಲಿ ಬಾಬಾರಾಮ್ ದೇವ್ ವಿರುದ್ಧ ಛತ್ತೀಸ್ ಗಡ ಐಎಂಎ ಅಧ್ಯಕ್ಷ ಡಾ.ರಾಕೇಶ್ ಗುಪ್ತ ದೂರು ದಾಖಲಿಸಿದ್ದರು, ದೂರನ್ನು ಪರಿಶಿಲಿಸಿದ ನಂತರ ಐಫ್ ಐ ಆರ್ ದಾಖಲಿಸಿರುವುದಾಗಿ ರಾಯಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ಸ್ 186, 188 ಮತ್ತು 270 , 504 ಮತ್ತು 2005ರ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಎಫ್ ಐ ಆರ್ ದಾಖಲಿಸಲಾಗಿದೆ. ಅಲೋಪತಿಯ ವೈದ್ಯ ಪದ್ಧತಿ ಬಗ್ಗೆ ಮಾಡಿದ ಟೀಕೆಗಳಿಗಾಗಿ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ರಾಯಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಿಸಲಾಗಿತ್ತು ಎಂದು ಡಾ.ಗುಪ್ತಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


