ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಕೌಂಟರ್ ಸ್ಪೆಷಲಿಸ್ಟ್, ಶಿವಸೇನೆ ನಾಯಕನ ಮನೆ ಮೇಲೆ ಎನ್ಐಎ ದಾಳಿ
ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆಂದು ಬಂದಿದೆ.

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕರಾಗಿರುವ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ಬಂದಿದೆ.
ಮನ್‌ಸುಖ್ ಹಿರೇನ್ ಪ್ರಕರಣದಲ್ಲಿ ಶರ್ಮಾ ಅವರು ಆರೋಪಿಗಳಿಗೆ ಸಹಾಯ ಮಾಡಿರುವ ಕುರಿತು ಸುಳಿವುಗಳು ದೊರೆತ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಫೆ. 25ರಂದು ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿತ್ತು. ಈ ಕುರಿತು ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ. ಸ್ಫೋಟಕ ತುಂಬಿದ್ದ ವಾಹನದಲ್ಲಿ ಬೆದರಿಕೆಯ ಪತ್ರವೂ ಇತ್ತು.
ಮುಕೇಶ್ ಅವರ ನಿವಾಸದ ಬಳಿ ಪತ್ತೆಯಾಗಿದ್ದ ವಾಹನವು ಮನ್‌ಸುಖ್ ಹಿರೇನ್ ಅವರಿಗೆ ಸೇರಿದ್ದಾಗಿತ್ತು, ಈ ವಾಹನ ಕಳವಾಗಿದ್ದ ಕುರಿತು ವಾರದ ಹಿಂದೆಯಷ್ಟೇ ಹಿರೇನ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾರ್ಚ್ 5ರಂದು ಹಿರೇನ್ ಅವರ ಶವವು ಠಾಣೆ ಸಮೀಪ ಪತ್ತೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


