ಚೋಕ್ಸಿ ತ್ವರಿತಗತಿ ಗಡಿಪಾರಿಗೆ ಡೊಮಿನಿಕಾದೊಂದಿಗೆ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ: ಎಂಇಎ
ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ತ್ವರಿತವಾಗಿ ಗಡಿಪಾರು ಮಾಡುವುದು ಹಾಗೂ ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಡೊಮಿನಿಕಾದೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ನವದೆಹಲಿ: ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ತ್ವರಿತವಾಗಿ ಗಡಿಪಾರು ಮಾಡುವುದು ಹಾಗೂ ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಡೊಮಿನಿಕಾದೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಕೆರಿಬ್ಬಿಯನ್ ದ್ವೀಪ ರಾಷ್ಟ್ರಕ್ಕೆ ಚೋಕ್ಸಿಯ ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಜೂ.25 ವರೆಗೂ ವಿಸ್ತರಿಸಿದೆ.
ಆನ್ ಲೈನ್ ಮಾಧ್ಯಮಗೋಷ್ಠಿಯಲ್ಲಿ ಚೋಕ್ಸಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಚಿ ಚೋಕ್ಸಿ ಕಾಮನ್ ವೆಲ್ತ್ ಆಫ್ ಡೊಮಿನಿಕಾದ ಅಧಿಕಾರಿಗಳ ವಶದಲ್ಲಿಯೇ ಇದ್ದಾರೆ, ಗಡಿಪಾರಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ ಎಂದು ಹೇಳಿದ್ದಾರೆ.
"ಮೆಹುಲ್ ಚೋಕ್ಸಿ ಅವರನ್ನು ತ್ವರಿತವಾಗಿ ಗಡಿಪಾರು ಮಾಡುವುದು ಹಾಗೂ ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಡೊಮಿನಿಕಾದೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ" ಎಂದು ಅರಿಂದಮ್ ಬಗಚಿ ಹೇಳಿದ್ದಾರೆ.
ಮೆಹುಲ್ ಚೋಕ್ಸಿ ಭಾರತದಲ್ಲಿ ಎದುರಿಸುತ್ತಿರುವ ಆರೋಪಗಳು ಹಾಗೂ ಅವರ ಮುಂದುವರಿದ ಭಾರತೀಯ ಪೌರತ್ವಕ್ಕೆ ಸಂಬಂಧಿಸಿದ ಸಂಗತಿಗಳನ್ನು ಕಾಮನ್ ವೆಲ್ತ್ ಆಫ್ ಡೊಮಿನಿಕಾದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಎಂಇಎ ವಕ್ತಾರರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


