ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಉತ್ತಮ: ಉದ್ಧವ್ ಠಾಕ್ರೆಗೆ ಶಿವಸೇನೆ ಶಾಸಕ
ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ತೂಗುಗತ್ತಿಯಲ್ಲಿರುವ ಶಾಸಕ ಪ್ರತಾಪ್ ಸರ್ನಾಯ್ಕ್ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಮಾಡಿಕೊಳ್ಳುವುದು ಅತ್ಯುತ್ತಮ ಎಂದು ಹೇಳಿದ್ದಾರೆ.
ಜೂ.10 ರಂದು ಪತ್ರ ಬರೆದಿದ್ದು, ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಮುರಿದುಬಿದ್ದಿದ್ದರೂ ಉಭಯ ಪಕ್ಷಗಳ ನಾಯಕರ ನಡುವಿನ ವೈಯಕ್ತಿಕ ಸಾಮರಸ್ಯ ಎಂದಿನಂತೆಯೇ ಇದೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಸರ್ನಾಯ್ಕ್ ಗೆ ಸಂಬಂಧಿಸಿದ ಜಾಗಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿತ್ತು. ಶಿವಸೇನೆ ಈ ದಾಳಿಯನ್ನು ರಾಜಕೀಯ ಹಗೆತನ ಎಂದು ಆರೋಪಿಸಿದ್ದಾರೆ.
ನಾನು ಅರ್ಜುನನಂತೆ ಯುದ್ಧ ಮಾಡಿತ್ತಿದ್ದೇನೆ, ನನ್ನ ಸರ್ಕಾರ ಅಥವಾ ನಮ್ಮ ನಾಯಕರ ಬೆಂಬಲ ತೆಗೆದುಕೊಳ್ಳದೇ ಕಳೆದ 7 ತಿಂಗಳಲ್ಲಿ ಏಕಾಂಗಿಯಾಗಿ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದು ಸರ್ನಾಯ್ಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


