ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2.1 ತೀವ್ರತೆಯ ಲಘು ಭೂಕಂಪ: ಆತಂಕದಲ್ಲಿ ಜನತೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ, ರಿಕ್ಟರ್ ಮಾಪಕನದಲ್ಲಿ 2.1 ಎಂದು ದಾಖಲಾಗಿರುವುದಾಗಿ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ, ರಿಕ್ಟರ್ ಮಾಪಕನದಲ್ಲಿ 2.1 ಎಂದು ದಾಖಲಾಗಿರುವುದಾಗಿ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆಯ ಭೂಕಂಪ ದೆಹಲಿಯ ಪಂಜಾಬಿ ಬಾಗ್ ಬಳಿ ಸಂಭವಿಸಿದೆ ಎಂದು ರಾಷ್ಟ್ರಿಯ ಭೂಕಂಪನದ ಕೇಂದ್ರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಭೂಕಂಪನದಿಂದ ಜೀವ ಅಥವಾ ಆಸ್ತಿಗೆ ಯಾವುದೇ ಹಾನಿ ಸಂಭವಿಸಿರುವ ಬಗ್ಗೆ ಯಾವುದೇ ವರದಿಗಳಾಗಿಲ್ಲ.
ದೆಹಲಿ ಜೊತೆಗೆ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿಯೂ ಇಂದು ಬೆಳಗಿನ ಜಾವ ಒಂದರ ಹಿಂದೆ ಇನ್ನೊಂದರಂತೆ ಭೂಕಂಪ ಸಂಭವಿಸಿದ್ದು, ಜನರಲ್ಲಿ ಭೀತಿ ಉಂಟು ಮಾಡಿದೆ.
3.1-3.6 ತೀವ್ರತೆ ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಸಂಸ್ಥೆ ಹೇಳಿದೆ. ಆದರೆ ಭೂಕಂಪದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
ಎನ್‌ಸಿಎಸ್ ಪ್ರಕಾರ ಮೊದಲ ಭೂಕಂಪ ಅರುಣಾಚಲ ಪ್ರದೇಶದ ಪಂಗಿನ್‌ನಲ್ಲಿ ಮಧ್ಯರಾತ್ರಿ ಬಳಿಕ 1:02 ಗಂಟೆಗೆ ಸಂಭವಿಸಿದೆ. ಬಳಿಕ ಮಣಿಪುರದ ಉಕ್ರುಲ್ ಜಿಲ್ಲೆಯ ಶಿರೂಯಿ ಗ್ರಾಮದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿತು. ಮೊದಲ ಭೂಕಂಪ 20 ಕಿಲೋಮೀಟರ್ ಆಳದಲ್ಲಿ ಮತ್ತು ಎರಡನೇ ಭೂಕಂಪ 30 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಸಂಸ್ಥೆ ಹೇಳಿದೆ.
ಮುಂಜಾನೆ 5:41ರ ಸುಮಾರಿಗೆ ಮತ್ತೊಂದು ಲಘು ಭೂಕಂಪ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.1ರಷ್ಟಿತ್ತು. ಉತ್ತರಾಖಂಡದ ಉತ್ತರಕಾಶಿಯಿಂದ ಉತ್ತರಕ್ಕೆ 62 ಕಿಲೋಮೀಟರ್ ದೂರದಲ್ಲಿ ಈ ಭೂಕಂಪ ಸುಮಾರು 15 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


