ಕೇರಳದಲ್ಲಿ ಭೀಕರ ಅಪಘಾತ: ಕಾರು-ಲಾರಿ ಮುಖಾಮುಖಿ ಢಿಕ್ಕಿ, 5 ಸಾವು
ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊಚ್ಚಿನ್: ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪ ವೈದ್ಯಾರಂಗಡಿ ಬಳಿ ಪುಲಿನ್ಜೋಡ್ ರಸ್ತೆಯಲ್ಲಿ ಇಂದು ಮುಂಜಾನೆ 4.40ರ ಸುಮಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರು-ಲಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಪಾಲಕ್ಕಾಡ್ ನ ಚೆರ್ಪುಲ್ಲಸಿರಿ ನಿವಾಸಿಗಳಾದ ನಾಸರ್, ಜುಬೈರ್, ಮುಹಮ್ಮದ್ ಸಾಹೀರ್, ಹಸನಾರ್, ಮತ್ತು ತಾಹಿರ್ ಎಂದು ಗುರುತಿಸಲಾಗಿದೆ. ಐದೂ ಮಂದಿ ಮಹಿಂದ್ರಾ ಬೊಲೆರೋ ವಾಹನದಲ್ಲಿ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯನ್ವಯ ಭಾರಿ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಕಾರು ನೇರವಾಗಿ ಎದುರಿಗೆ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐದೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫೆರೋಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


