ಪಂಜಾಬ್ ಚುನಾವಣೆಗೂ ಮುನ್ನ ಮಾಜಿ ಪೊಲೀಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಎಎಪಿಗೆ ಸೇರ್ಪಡೆ
2015ರ ಕೋಟ್ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅಮೃತಸರ: 2015ರ ಕೋಟ್ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅಮೃತಸರಕ್ಕೆ ತೆರಳಿದ್ದು, ಪಂಜಾಬ್ ಮಾಜಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ವಿಜಯ್ ಪ್ರತಾಪ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.
'ಕುನ್ವರ್ ವಿಜಯ್ ಪ್ರತಾಪ್ ಎಎಪಿ ಕುಟುಂಬದ ಭಾಗವಾಗಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮನ್ ಹೇಳಿದ್ದಾರೆ.
2029ರಲ್ಲಿ ಕುನ್ವರ್ ವಿಜಯ್ ಪ್ರತಾಪ್ ನಿವೃತ್ತರಾಗಬೇಕಿತ್ತು. ಆದರೆ ಅದಕ್ಕೂ ಮುನ್ನ ರಾಜಿನಾಮೆ ನೀಡಿದ್ದು ಪ್ರತಾಪ್ ಅವರ ರಾಜೀನಾಮೆಯನ್ನು ಸ್ವೀಕರಿಸಲು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರಂಭದಲ್ಲಿ ನಿರಾಕರಿಸಿದ್ದರು. ಆದರೆ ಮಾಜಿ ಐಜಿ ಶ್ರೇಣಿಯ ಅಧಿಕಾರಿ ತಮ್ಮ ತೀರ್ಮಾನಕ್ಕೆ ಬಲವಾಗಿ ಅಂಟಿಕೊಂಡಿದ್ದರಿಂದ ಮುಖ್ಯಮಂತ್ರಿಗಳು ಅವರ ಅಕಾಲಿಕ ನಿವೃತ್ತಿ ಕೋರಿಕೆಯನ್ನು ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


