ದೇಶ

ಕೋವಿಡ್-19: ಒಂದೇ ದಿನ 53,256 ಹೊಸ ಸೋಂಕು ಪ್ರಕರಣ ವರದಿ; 1,422 ಸಾವು!

ದೇಶಾದ್ಯಂತ ಕೊರೋನಾ ಸೋಂಕು ಸಾಂಕ್ರಾಮಿಕ ಅಬ್ಬರ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ಕಳೆದ 88 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ.

ಕೋವಿಡ್-19: ಒಂದೇ ದಿನ 53,256 ಹೊಸ ಸೋಂಕು ಪ್ರಕರಣ ವರದಿ; 1,422 ಸಾವು!
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಸಾಂಕ್ರಾಮಿಕ ಅಬ್ಬರ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ಕಳೆದ 88 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣ ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,99,35,221ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 1,422 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 3,88,135ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,88,44,199ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 7,02,887 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 13,88,699 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 39,24,07,782ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 28,00,36,898 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.