ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಕೇಸ್ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್!
ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರ ಪ್ರದೇಶ ಹೈಕೋರ್ಟ್ 11 ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಡ: ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರ ಪ್ರದೇಶ ಹೈಕೋರ್ಟ್ 11 ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.
ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದ ವೇಳೆ ನ್ಯಾಯಾಲಯದ ಬಗ್ಗೆ ಮಾಡಿದ್ದ ಕಮೆಂಟ್ಸ್ ಗಳನ್ನು ಆಧರಿಸಿ ಕೆಳ ನ್ಯಾಯಾಲಯ ಕೇಸ್ ದಾಖಲಿಸಿದೆ.
ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾ ಅವರು ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದು , ಪೊಲೀಸರಿಗೆ ನೋಟಿಸ್ ನೀಡುವುದನ್ನು ತಡೆದಿದ್ದಾರೆ. ಹೈಕೋರ್ಟ್ ಆಡಳಿತಾತ್ಮಕ ಸಮಿತಿ ಶಿಫಾರಸ್ಸಿನಂತೆ ಸುಮೊಟು ಕೇಸ್ ದಾಖಲಿಸಿಕೊಳ್ಳಲಾಗಿದೆ.
2016 ರಲ್ಲಿ ಜಗನ್ ಮೋಹನ್ ರೆಡ್ಡಿ ವಿರೋಧ ಪಕ್ಷದಲ್ಲಿದ್ದಾಗ ಅಂದು ಮುಖ್ಯಮಂತ್ರಿಯಾಗಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು.
ಈ ಸಂಬಂಧ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಕೇಸ್ ಗಳು ದಾಖಲಾಗಿದ್ದವು, ಇದನ್ನು ಪರಿಶೀಲಿಸಿದ ಪೊಲೀಸರು, ಕ್ರಿಯಾಶೀಲ ಸಾಕ್ಷ್ಯಗಳ ಅನುಪಸ್ಥಿತಿಯಲ್ಲಿ ಅಂತಿಮ ವರದಿಗಳನ್ನು ಸಲ್ಲಿಸಿದ್ದಾರೆ.
ಅರ್ಜಿದಾರರು ಸಹ ಪ್ರಕರಣಗಳನ್ನು ಮುಚ್ಚಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಿಗೆ ಮಾಹಿತಿ ನೀಡಿದ್ದರಿಂದ ಕೆಳ ನ್ಯಾಯಾಲಯಗಳು ಪ್ರಕರಣಗಳನ್ನು ಕ್ಲೋಸ್ ಮಾಡಿದ್ದವು. ನ್ಯಾಯಾಲಯದ ಆಡಳಿತ ಸಮಿತಿಯು ಅದರಲ್ಲಿ ದೋಷವನ್ನು ಕಂಡುಹಿಡಿದಿದ್ದು ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಂಡಿತು.
ಸಿಆರ್ ಪಿಸಿ ಸೆಕ್ಷನ್ 397, 401, 482 ಮತ್ತು 483 ರ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಬಳಸಿಕೊಂಡು ಸುಮಟು ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಅಡ್ವೊಕೇಟ್ ಜನರಲ್ ಶ್ರೀರಾಮ್ ವಾದಿಸಿದರು. ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ನಿರ್ಧಾರವನ್ನು ಆಧರಿಸಿ ಸುಮೊಟು ಕೇಸ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


