ದೇಶ

ಕಾರವಾರಕ್ಕಿಂದು ರಾಜನಾಥ್ ಸಿಂಗ್ ಭೇಟಿ: ನೌಕಾನಲೆ ಸುತ್ತಲೂ ಬಿಗಿಭದ್ರತೆ

ಏಷ್ಯಾದಲ್ಲಿಯೇ ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಕಾರವಾರಕ್ಕಿಂದು ರಾಜನಾಥ್ ಸಿಂಗ್ ಭೇಟಿ: ನೌಕಾನಲೆ ಸುತ್ತಲೂ ಬಿಗಿಭದ್ರತೆ
ರಾಜನಾಥ್ ಸಿಂಗ್
Published On :

ಕಾರವಾರ: ಏಷ್ಯಾದಲ್ಲಿಯೇ ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ಕದಂಬ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಾಮಗಾರಿಗಳ ವೀಕ್ಷಣೆಗೆ ರಾಜನಾಥ್ ಸಿಂಗ್ ಆಗಮಿಸುತ್ತಿದ್ದಾರೆ. ಇದೇ ವೇಳೆ ನೌಕಾನೆಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಟ್ಟಿಯೊಂದನ್ನು ಉದ್ಘಾಟಿಸಲಿದ್ದಾರೆ.

ಈಗಾಗಲೇ ಹೆಲಿಕಾಪ್ಟರ್ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಿಂದ ರಾಜನಾಥ್ ಸಿಂಗ್ ಅವರು ಹೊರಟಿದ್ದು, ಮೊದಲಿಗೆ ಕೊಚ್ಚಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ಮಧ್ಯಾಹ್ನದ ವೇಳಿಗೆ ಕಾರವಾರ ನೌಕಾನೆಲೆಗೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ. 

ಹೆಲಿಕಾಪ್ಟರ್ ಮೂಲಕ ರಾಜನಾಥ್ ಸಿಂಗ್ ಅವರು ಪ್ರಯಾಣ ಮಾಡುತ್ತಿದ್ದು, ಈ ವೇಳೆ ಹವಾಮಾನ ವೈಪರೀತ್ಯ ಉಂಟಾಗಿದ್ದೇ ಆದರೆ, ರಸ್ತೆ ಮಾರ್ಗವಾಗಿ ಬರುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಸ್ತೆಗಳಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ಕಾರವಾರ, ಕೊಚ್ಚಿ ಭೇಟಿ ಕುರಿತು ರಾಜನಾಥ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕಾರವಾರ ಹಾಗೂ ಕೊಚ್ಚಿಗೆ ಎರಡು ದಿನಗಳ ಕಾಲ ಭೇಟಿ ನೀಡುತ್ತಿದ್ದು, ದೆಹಲಿಯಿಂದ ತೆರಳಲಾಗುತ್ತಿದೆ. ಭೇಟಿ ವೇಳೆ ಕಾರವಾರ ನೌಕಾನೆಲೆ ವಿಸ್ತರಣೆಯ ಕಾಮಗಾರಿಗಳನ್ನು ಪರಿಶೀಲನೆ ಹಾಗೂ ಕೊಚ್ಚಿಯಲ್ಲಿ ಇಂಡಿಜಿನಸ್​ ವಿಮಾನವಾಹಕ ನೌಕೆ (​ಐಎಸಿ) ನಿರ್ಮಾಣದ ಪ್ರಗತಿಯನ್ನೂ ಪರಿಶೀಲಿಸಲಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.