ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.
ಭಯೋತ್ಪಾದನೆಯ ದುಷ್ಕರ್ಮಿಗಳನ್ನು ತ್ವರಿತವಾಗಿ ಕಟಕಟೆಗೆ ತರುವುದಕ್ಕೆ ಅ;ಜಿತ್ ದೋವಲ್ ಕರೆ ನೀಡಿದ್ದಾರೆ.
ತಜಕಿಸ್ತಾನದಲ್ಲಿ ನಡೆದ ಎಸ್ ಸಿಒ ಸದಸ್ಯ ರಾಷ್ಟ್ರಗಳ ಭದ್ರತಾ ಸಲಹೆಗಾರರ ಸಭೆಯಲ್ಲಿ ದೋವಲ್ ಭಾಗಿಯಾಗಿದ್ದು, ಯುಎನ್ ಗುರುತಿಸಿರುವ ಭಯೋತ್ಪಾದಕರು, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯುನೈಟೆಡ್ ನೇಷನ್ಸ್ ನಿರ್ಣಯಗಳನ್ನು ಪೂರ್ಣವಾಗಿ ಜಾರಿಗೆ ತರುವುದಕ್ಕೆ ಆಗ್ರಹಿಸಿದ್ದಾರೆ.
ಭಯೋತ್ಪಾದಕ ಸಂಘಟನೆಗಳಿಗೆ ಲಭ್ಯವಾಗುತ್ತಿರುವ ಆರ್ಥಿಕ ನೆರವಿಗೆ ಕತ್ತರಿ ಹಾಕುವುದಕ್ಕೆ ಅಂತಾರಾಷ್ಟ್ರೀಯ ಮಾನದಂಡಗಳ ಅಳವಡಿಕೆಗೆ ಕರೆನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


