ಪಾರದರ್ಶಕವಾಗಿ ರಾಜ್ಯವ್ಯಾಪಿ ಲಸಿಕೆ ವಿತರಣೆ; ಮಾಧ್ಯಮಗಳ ಆರೋಪ ನಿರಾಧಾರ: ಕೇಂದ್ರ ಸರ್ಕಾರ
ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆಗಳನ್ನು ವಿತರಣೆ ಮಾಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ನವದೆಹಲಿ: ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆಗಳನ್ನು ವಿತರಣೆ ಮಾಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ, ರಾಜ್ಯಗಳ ಜನಸಂಖ್ಯೆ, ಪ್ರಕರಣಗಳ ಸಂಖ್ಯೆ, ಬಳಕೆಯ ದಕ್ಷತೆ ಮತ್ತು ವ್ಯರ್ಥ ಅಂಶಗಳ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.
ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆ ವಿತರಣೆ ಮಾಡಿಲ್ಲ ಎಂಬ ಕೆಲ ಮಾಧ್ಯಮಗಳ ಆರೋಪ ಸಂಪೂರ್ಣವಾಗಿ ಆಧಾರ ರಹಿತವಾಗಿದ್ದು, ಪೂರ್ಣ ಮಾಹಿತಿ ಇಲ್ಲ ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪಾರದರ್ಶಕ ರೀತಿಯಲ್ಲಿ ಕೋವಿಡ್-19 ಲಸಿಕೆ ವಿತರಣೆ ಮಾಡಿದೆ ಎಂದು ಸ್ಪಷ್ಟಪಡಿಸಿರುವ ಸಚಿವಾಲಯ, ವೈಜ್ಞಾನಿಕತೆ ಮತ್ತು ಸಾಂಕ್ರಾಮಿಕ ಘಟನೆ, ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಆಧಾರದ ಮೇಲೆ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನವನ್ನು ರೂಪಿಸಲಾಗಿದೆ ಎಂದು ಹೇಳಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪರಿಣಾಮಕಾರಿ ಸಹಭಾಗಿತ್ವ ಮತ್ತು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಪರಿಣಾಮಕಾರಿಯಾಗಿ ಲಸಿಕೆ ಅಭಿಯಾನವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


