ದೇಶ

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 776 ವೈದ್ಯರ ಸಾವು, ಬಿಹಾರದಲ್ಲಿ ಗರಿಷ್ಠ: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 776 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ಬಿಹಾರ ರಾಜ್ಯದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ಕೊರೋನಾ ವೈರಸ್ 2ನೇ ಅಲೆ ವೇಳೆ ದೇಶದಲ್ಲಿ 776 ವೈದ್ಯರ ಸಾವು, ಬಿಹಾರದಲ್ಲಿ ಗರಿಷ್ಠ: ಏಮ್ಸ್
ಸಂಗ್ರಹ ಚಿತ್ರ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 776 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು, ಈ ಪೈಕಿ ಬಿಹಾರ ರಾಜ್ಯದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳನ್ನು ಏಮ್ಸ್ ನೀಡಿದ್ದು, ದೇಶಾದ್ಯಂತ 776 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಬಿಹಾರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಬಿಹಾರದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದು, ದೆಹಲಿಯ 109 ವೈದ್ಯರು ಸಾವನ್ನಪ್ಪಿದ್ದಾರೆ.

ಉಳಿದಂತೆ ಉತ್ತರ ಪ್ರದೇಶದಲ್ಲಿ 79 ಮಂದಿ ವೈದ್ಯರು ಸಾವನ್ನಪ್ಪಿದ್ದು, ಕರ್ನಾಟಕದಲ್ಲಿ 9 ಮಂದಿ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದೆ.

Story image

ಇನ್ನು ಕಳೆದ ಮೊದಲ ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಪ್ರಸ್ತುತ ಐಎಂಎ ಬಳಿ 3.5 ಲಕ್ಷ ಕಾರ್ಯನಿರತ ವೈದ್ಯ ಸದಸ್ಯರ ದತ್ತಾಂಶವಿದ್ದು, ಇಂದು ದೇಶಾದ್ಯಂತ 12 ಲಕ್ಷಕ್ಕೂ ಅಧಿಕ ವೈದ್ಯರು ಕೋವಿಡ್ ಸಾಂಕ್ರಾಮಿಕದ ವೇಳೆ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.