ಎರಡನೇ ಮದುವೆಗೆ ನಿರ್ಧರಿಸಿದ ಪತಿಯ ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪತ್ನಿ!
ವಿಲಕ್ಷಣ ಘಟನೆಯೊಂದರಲ್ಲಿ ತನ್ನ ಪತಿ ಇನ್ನೊಂದು ವಿವಾಹವಾಗಲು ಯೋಜಿಸಿದ್ದನೆಂಬ ಕಾರಣಕ್ಕೆ ಪತ್ನಿಯೇ ಆತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಮುಜಾಫರ್ ನಗರ(ಉತ್ತರಪ್ರದೇಶ): ವಿಲಕ್ಷಣ ಘಟನೆಯೊಂದರಲ್ಲಿ ತನ್ನ ಪತಿ ಇನ್ನೊಂದು ವಿವಾಹವಾಗಲು ಯೋಜಿಸಿದ್ದನೆಂಬ ಕಾರಣಕ್ಕೆ ಪತ್ನಿಯೇ ಆತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಶಿಕಾರ್‌ಪುರ ಗ್ರಾಮದಲ್ಲಿ ಗುರುವಾರ ಸಂಜೆ ಭಜರಾ ಖುರ್ದ್ ಗ್ರಾಮದ ಮಸೀದಿಯಲ್ಲಿ ಇಮಾಮ್ ಆಗಿದ್ದ ಮೌಲ್ವಿ ವಕಿಲ್ ಅಹ್ಮದ್ ಅವರನ್ನ ಆತನ ಪತ್ನಿ ಹಜ್ರಾ ಗಂಭೀರ ಗಾಯಗೊಳಿಸಿದ್ದಾಳೆ.
ಮೌಲ್ವಿ ವಕಿಲ್ ಅಹ್ಮದ್ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ಯೋಜಿಸುತ್ತಿದ್ದಾನೆ ಎಂದು ಹಜ್ರಾ ಪೊಲೀಸರಿಗೆ ತಿಳಿಸಿದ್ದು , ಅದರ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅಲ್ಲದೆ ಶೀಘ್ರದಲ್ಲೇ ಹಿಂಸಾತ್ಮಕ ರೂಪ ಪಡೆದು ಮೌಲ್ವಿಯ ಹತ್ಯೆಗೆ ಕಾರಣವಾಗಿದೆ.
ಘಟನೆ ಸಂಬಂಧ ಭೋರಕ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ನಿತೇಂದ್ರ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


