ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಎನ್ ಕೌಂಟರ್: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ನಡೆದ ಸೇನಾ ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಅವಿತಿರುವ ಮತ್ತಷ್ಟು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ನಡೆದ ಸೇನಾ ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಅವಿತಿರುವ ಮತ್ತಷ್ಟು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಂಜಿಪೋರಾದಲ್ಲಿ ಉಗ್ರರು ಅವಿತಿರುವ ಕುರಿತು ಮಾಹಿತಿ ತಿಳಿದ ಸೇನಾಪಡೆಗಳು ಕೂಡಲೇ ಸ್ಥಳಕ್ಕೆ ಧಾವಿಸಿವೆ. ಈ ವೇಳೆ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆಗರೆದಿದ್ದಾರೆ. ಈ ವೇಳೆ ಸೈನಿಕರು ಪ್ರತಿದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಮೃತ ಉಗ್ರನ ಗುರುತು ಪತ್ತೆಯಾಗಿಲ್ಲವಾದರೂ ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅವಿತಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಅಂತೆಯೇ ಉಗ್ರರು ತಪ್ಬಿಸಿಕೊಳ್ಳದಂತೆ ಸೈನಿಕರು ಸುತ್ತುವರೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


