ಕೇಂದ್ರದ ಕೃಷಿ ಮಸೂದೆ: ಚಂಡೀಗಢದಲ್ಲಿ ಇಂದು ರೈತರಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಕೆ, ದೆಹಲಿ ಸುತ್ತಮುತ್ತ ಭದ್ರತೆ
ಹರ್ಯಾಣ ಭಾಗದ ರೈತರು ಮೆರವಣಿಗೆ ಸಾಗಿ ರಾಜ್ಯಪಾಲರ ನಿವಾಸಕ್ಕೆ ಇಂದು ಆಗಮಿಸಿ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ತಮ್ಮ ಮನವಿಯನ್ನು ಸಲ್ಲಿಸಲಿದ್ದಾರೆ. ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ.

ಚಂಡೀಗಢ: ಹರ್ಯಾಣ ಭಾಗದ ರೈತರು ಮೆರವಣಿಗೆ ಸಾಗಿ ರಾಜ್ಯಪಾಲರ ನಿವಾಸಕ್ಕೆ ಇಂದು ಆಗಮಿಸಿ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ತಮ್ಮ ಮನವಿಯನ್ನು ಸಲ್ಲಿಸಲಿದ್ದಾರೆ. ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ.
ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸುವುದು ತಮ್ಮ ಉದ್ದೇಶವಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚದ ಭಾಗವಾಗಿರುವ ರೈತರ ಪ್ರತಿಭಟನೆಯಲ್ಲಿ ತೊಡಗಿರುವ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ದೆಹಲಿಯ ಗಡಿಭಾಗದ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಭಾಗಗಳಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರು ಇಂದು 'ಕೃಷಿಯನ್ನು ರಕ್ಷಿಸಿ, ಪ್ರಜಾಪ್ರಭುತ್ವ ದಿನವನ್ನು ರಕ್ಷಿಸಿ' ಎಂಬ ಘೋಷವಾಕ್ಯದೊಂದಿಗೆ ತಮ್ಮ ಏಳು ತಿಂಗಳು ಪೂರ್ಣಗೊಂಡ ಪ್ರತಿಭಟನೆಯ ದಿನವನ್ನು ಆಚರಿಸಲಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚದ ಕರೆಯ ಮೇರೆಗೆ ಚಂಡೀಗಢದಲ್ಲಿ ಭಾರತೀಯ ಕಿಸಾನ್ ಸಂಘಟನೆಯ ರೈತರು ಮೆರವಣಿಗೆ ಸಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದೇವೆ. ಪ್ರತಿಭಟನಾ ನಿರತ ರೈತರು ಬೆಳಗಿನ ಹೊತ್ತು ಪಂಚ್ ಕುಲಾದಲ್ಲಿ ಸೇರಿ ನಂತರ ರಾಜಭವನಕ್ಕೆ ಮೆರವಣಿಗೆ ಹೊರಡಲಿದ್ದೇವೆ ಎಂದು ಸಂಘಟನೆ ತಿಳಿಸಿದೆ.
ಈ ಮಧ್ಯೆ ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಚಂಡೀಗಢ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ತೀವ್ರ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಚಂಡೀಗಢದಲ್ಲಿ 13 ಪ್ರವೇಶ ಮತ್ತು ನಿರ್ಗಮನ ಕೇಂದ್ರಗಳು ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮುಚ್ಚಿರುತ್ತದೆ ಎಂದು ಭಾರತೀಯ ಕಿಸಾನ್ ಸಂಘ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


