ಡೆಲ್ಟಾ ಪ್ಲಸ್ ರೂಪಾಂತರ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ- ಐಸಿಎಂಆರ್ ತಜ್ಞ
ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಮಿರನ್ ಪಾಂಡ ಹೇಳಿದ್ದಾರೆ.

ನವದೆಹಲಿ: ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಮಿರನ್ ಪಾಂಡ ಹೇಳಿದ್ದಾರೆ.
ಡೆಲ್ಟಾ ಪ್ಲಸ್ ರೂಪಾಂತರದ ವಿರುದ್ಧ ಲಭ್ಯವಿರುವ ಕೋವಿಡ್-19 ಲಸಿಕೆಯ ಪರಿಣಾಮಕಾರಿತ್ವ ಕುರಿತು ಅಧ್ಯಯನ ನಡೆಸಲಾಗಿದ್ದು, ಇದನ್ನು ಭಾರತದ ಹಲವಾರು ಭಾಗಗಳಲ್ಲಿ ಪತ್ತೆಹಚ್ಚಿದ ನಂತರ ರೂಪಾಂತರದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಎರಡನೇಯ ಅಲೆಯಷ್ಟು ಮೂರನೇ ಅಲೆ ತೀವ್ರವಾಗಿರುವುದಿಲ್ಲ ಎಂದು ಡಾ. ಸಮಿರನ್ ಪಾಂಡ ಹೇಳಿದ್ದಾರೆ. ಏಪ್ರಿಲ್- ಮೇ ನಲ್ಲಿ ದೇಶಾದ್ಯಂತ ಎರಡನೇ ಅಲೆ ತೀವ್ರ ರೀತಿಯ ಪರಿಣಾಮ ಬೀರಿತ್ತು.
ಡೆಲ್ಟ್ ಪ್ಲಸ್ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಲಹೆ ನೀಡಿರುವ ಡಾ. ಸಮಿರನ್ ಪಾಂಡ, ಲಸಿಕಾ ಅಭಿಮಾನವನ್ನು ಹೆಚ್ಚಿಸಬೇಕಾದ ಅಗತ್ಯವಿದೆ. ಮುಂದಿನ ಅಲೆ ನಿಯಂತ್ರಿಸಲು ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


