ಛತ್ತೀಸ್ ಗಢ: 25 ಪ್ರಕರಣಗಳಲ್ಲಿ ಬೇಕಿದ್ದ ನಕ್ಸಲ್ ಎನ್ ಕೌಂಟರ್ ನಲ್ಲಿ ಹತ್ಯೆ
25 ಕ್ರಿಮಿನಲ್ ಪ್ರಕರಣಗಳಿದ್ದ, ತಲೆಗೆ 5 ಲಕ್ಷ ರೂಪಾಯಿ ಬಹುಮಾನಗಳನ್ನು ಹೊಂದಿದ್ದ ನಕ್ಸಲ್ ಓರ್ವನನ್ನು ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ರಾಯ್ ಪುರ: 25 ಕ್ರಿಮಿನಲ್ ಪ್ರಕರಣಗಳಿದ್ದ, ತಲೆಗೆ 5 ಲಕ್ಷ ರೂಪಾಯಿ ಬಹುಮಾನಗಳನ್ನು ಹೊಂದಿದ್ದ ನಕ್ಸಲ್ ಓರ್ವನನ್ನು ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ದಾಂತೇವಾಡದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ 12:30 ಕ್ಕೆ ಗುಂಡಿನ ಚಕಮಕಿ ನಡೆದಿದೆ. ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ನಕ್ಸಲರಿಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಭದ್ರತಾ ಸಿಬ್ಬಂದಿಗಳು ಪ್ರತಿ ದಾಳಿ ನಡೆಸಿದ್ದಾರೆ.
ಕೆಲವು ಮಂದಿ ನಕ್ಸಲರು ಸ್ಥಳದಿಂದ ಪಲಾಯನ ಮಾಡಿ ದಟ್ಟ ಅರಣ್ಯ ಸೇರಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿಗಳು ನಕ್ಸಲರೊಬ್ಬರ ಮೃತದೇಹವನ್ನು ವಶಕ್ಕೆ ಪಡೆದಿದ್ದು, ಪಿಸ್ತೋಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮೃತ ನಕ್ಸಲ್ ನ್ನು ಸಂತೋಶ್ ಮರ್ಕಮ್ ಎಂದು ಗುರುತಿಸಲಾಗಿದ್ದು, ಮಲಂಗಿರ್ ಪ್ರದೇಶ ಸಮಿತಿಯ ಸದಸ್ಯ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


