ಕೋವಿಡ್ -19 ವೇಳೆ ಇಂಡೋ-ಜಪಾನೀಸ್ ಸಹಭಾಗಿತ್ವ ಜಾಗತಿಕ ಸ್ಥಿರತೆಗೆ ಹೆಚ್ಚು ಪ್ರಸ್ತುತ: ಪ್ರಧಾನಿ ನರೇಂದ್ರ ಮೋದಿ
ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಇಂಡೋ-ಜಪಾನೀಸ್ ಸ್ನೇಹ ಮತ್ತು ಪಾಲುದಾರಿಕೆ ಜಾಗತಿಕ ಸ್ಥಿರತೆ ಮತ್ತು ಸಮೃದ್ಧಿಗೆ ಹೆಚ್ಚು ಪ್ರಸ್ತುತವಾಗಿದೆ ಎಂದು ಭಾನುವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವಂತೆ ಕರೆ ನೀಡಿದರು.

ಅಹಮದಾಬಾದ್ : ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಇಂಡೋ-ಜಪಾನೀಸ್ ಸ್ನೇಹ ಮತ್ತು ಪಾಲುದಾರಿಕೆ ಜಾಗತಿಕ ಸ್ಥಿರತೆ ಮತ್ತು ಸಮೃದ್ಧಿಗೆ ಹೆಚ್ಚು ಪ್ರಸ್ತುತವಾಗಿದೆ ಎಂದು ಭಾನುವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವಂತೆ ಕರೆ ನೀಡಿದರು.
ಅಹಮದಾಬಾದ್ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಆವರಣದಲ್ಲಿ ಸ್ಥಾಪಿಸಲಾಗಿರುವ ಕೈಜಾನ್ ಅಕಾಡೆಮಿ ಮತ್ತು ಜಪಾನೀಸ್ ಜೆನ್ ಗಾರ್ಡನ್ ನ್ನು ವರ್ಚುಯಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜೆನ್ ಗಾರ್ಡನ್ ಮತ್ತು ಕೈಜಾನ್ ಅಕಾಡೆಮಿ ಭಾರತ ಮತ್ತು ಜಪಾನ್ ನಡುವಿನ ಸಂಬಂಧಗಳ ಸ್ವಾಭಾವಿಕತೆ ಮತ್ತು ಆಧುನಿಕತೆಯ ಸಂಕೇತವಾಗಿದೆ ಎಂದು ಹೇಳಿದರು.
ಜಪಾನ್‌ನ ಈಗಿರುವ ಪ್ರಧಾನ ಮಂತ್ರಿ ಯೋಶಿಹೈಡ್ ಸುಗಾ ಮತ್ತು ನಾನು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಜಾಗತಿಕ ಸ್ಥಿರತೆ ಮತ್ತು ಸಮೃದ್ಧಿ ಗಾಗಿ ಇಂಡೋ-ಜಪಾನೀಸ್ ಸ್ನೇಹ ಮತ್ತು ಸಹಭಾಗಿತ್ವ ಇನ್ನಷ್ಟು ಪ್ರಸ್ತುತವಾಗಿದೆ. ಹಲವಾರು ಜಾಗತಿಕ ಸವಾಲುಗಳನ್ನು ಎದುರಿಸುತ್ತಿರುವಾಗ, ನಮ್ಮ ಸ್ನೇಹ ಮತ್ತು ಸಂಬಂಧವು ದಿನದಿಂದ ದಿನಕ್ಕೆ ಬಲಗೊಳ್ಳುವುದು ಸಮಯದ ಅಗತ್ಯವಾಗಿದೆ ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


