ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿ ಮತ್ತೊಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ದೇಶದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕೆ.ಕೆ.ವೇಣುಗೋಪಾಲ್ ಅಧಿಕಾರ ಅವಧಿ ಇದು ಎರಡನೇ ಬಾರಿಗೆ ವಿಸ್ತರಣೆಯಾಗುತ್ತಿದ್ದು, ಅವರು 2022ರ ಜೂನ್ 30ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಕೆ.ಕೆ.ವೇಣುಗೋಪಾಲ್ ಅವರು 2017ರಲ್ಲಿ, ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. 2020ರಲ್ಲೇ ಅವರ ಅಧಿಕಾರ ಅವಧಿ ಮುಗಿಯಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು 2021ರ ಜೂ.30ರವರೆಗೆ ವಿಸ್ತರಿಸಿತ್ತು. ಇದೀಗ ಅವರ ನಿವೃತ್ತಿಗೆ ಇನ್ನೆರಡು ದಿನ ಇರಬೇಕಾದರೆ ಮತ್ತೊಂದು ವರ್ಷಗಳ ಕಾಲ ವಿಸ್ತರಣೆಯಾಗಿದೆ.
'ಸುಪ್ರೀಂಕೋರ್ಟ್‌ನಲ್ಲಿ ಅವರು ನಿರ್ವಹಿಸುತ್ತಿರುವ ಉನ್ನತ ಮಟ್ಟದ ಪ್ರಕರಣಗಳು ಮತ್ತು ಬಾರ್ ಅಸೋಸಿಯೇಷನ್‌ನಲ್ಲಿ ಅವರ ಅನುಭವವನ್ನು ಪರಿಗಣಿಸಿ, ಅವರ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಷ್ಟು ಶೀಘ್ರ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


