ಅತ್ಯಾಚಾರ ಪ್ರಕರಣ: ಕೇರಳದ ಇಬ್ಬರು ಸಿಪಿಎಂ ಕಾರ್ಯಕರ್ತರು ಪೋಲೀಸ್ ವಶಕ್ಕೆ
ವಡಗರ ಮುಡಪ್ಪಿಲಾವ್‌ನಲ್ಲಿರುವ ಮನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರೊಬ್ಬರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಮಾಜಿ ಸಿಪಿಎಂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಳಿಕ್ಕೋಡ್ (ಕೇರಳ): ವಡಗರ ಮುಡಪ್ಪಿಲಾವ್‌ನಲ್ಲಿರುವ ಮನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರೊಬ್ಬರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಮಾಜಿ ಸಿಪಿಎಂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಆರೋಪಿಗಳನ್ನು ಪುಲ್ಲುಲ್ಲಪರಂಬತ್ ನ ಬಾಬುರಾಜ್, ಸಿಪಿಎಂ ಮುಳ್ಳಿಯೇರಿ ಶಾಖಾ ಕಾರ್ಯದರ್ಶಿ ಮತ್ತು ಡಿವೈಎಫ್‌ಐ ಪದಿಯರಕ್ಕರ ಪ್ರದೇಶದ ಕಾರ್ಯದರ್ಶಿ ಟಿ.ಪಿ. ಲಿಜೀಶ್ ಎಂದು ಗುರುತಿಸಲಾಗಿದೆ.
ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದಾಗಿನಿಂದಲೂ ಇವರಿಬ್ಬರೂ ನಾಪತ್ತೆಯಾಗಿದ್ದರು. ಮೂಲಗಳ ಪ್ರಕಾರ, ಆರೋಪಿಗಳು ಪ್ರಾಥಮಿಕ ವಿಚಾರಣೆಗೆ ಒಳಗಾಗಿದ್ದಾರೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಶನಿವಾರ, ಸಿಪಿಎಂ ಕಾರ್ಯಕರ್ತರೂ ಆದ ವಿವಾಹಿತ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಮೂರು ತಿಂಗಳ ಹಿಂದೆ ಬಾಬುರಾಜ್ ತನ್ನ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ತರುವಾಯ, ಈ ಘಟನೆಯನ್ನು ತನ್ನ ಪತಿಗೆ ಹೇಳುವುದಾಗಿ ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಅವನು ಮತ್ತೆ ಹಲವಾರು ಬಾರಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡನು
ಘಟನೆ ಬಗ್ಗೆ ಸಾರ್ವಜನಿಕವಾಗಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುವ ಮೂಲಕ ಲಿಜೀಶ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅದರ ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


