ಜೂನ್ 2022 ರವರೆಗೆ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವಧಿ ವಿಸ್ತರಣೆ
ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅಮಿತಾಭ್ ಕಾಂತ್ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಮತ್ತೆ ಒಂದು ವರ್ಷ ವಿಸ್ತರಿಸಿದೆ.

ನವದೆಹಲಿ: ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅಮಿತಾಭ್ ಕಾಂತ್ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಮತ್ತೆ ಒಂದು ವರ್ಷ ವಿಸ್ತರಿಸಿದೆ.
ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಜೂನ್ 2022ರವರೆಗೂ ಅಮಿತಾಭ್ ಕಾಂತ್ ಅವರ ಅಧಿಕಾರವಧಿ ವಿಸ್ತರಣೆಯಾಗಿದೆ. 65 ವರ್ಷದ ನಾಗರಿಕ ಸೇವಾ ಅಧಿಕಾರಿಯ ಅಧಿಕಾರ ಮೂರನೇ ಬಾರಿಗೆ ವಿಸ್ತರಣೆಯಾಗಿದೆ.
2021 ರ ಜೂನ್ 30 ರ ನಂತರ ಒಂದು ವರ್ಷ ಅವಧಿ ವಿಸ್ತರಿಸಲು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅಂದರೆ 2022 ರ ಜೂನ್ 30 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರ ಅಧಿಕಾರವಧಿ ಇರಲಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.
ನಿಗದಿತ ಎರಡು ವರ್ಷಗಳ ಅವಧಿಗೆ ಅವರನ್ನು ಫೆಬ್ರವರಿ 17, 2016 ರಂದು ನ್ಯಾಷನಲ್ ಇನ್‌ಸ್ಟಿಟ್ಯೂಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ (ನೀತಿ ಆಯೋಗ) ಸಿಇಒ ಆಗಿ ನೇಮಿಸಲಾಗಿತ್ತು. ನಂತರ ಕಾಂತ್ ಅವರಿಗೆ 2019 ರ ಜೂನ್ 30 ರವರೆಗೆ ವಿಸ್ತರಣೆ ನೀಡಲಾಯಿತು. ಮತ್ತೆ ಎರಡು ವರ್ಷಗಳ ಅವಧಿಗೆ ಅವರ ಅಧಿಕಾರವಧಿಯನ್ನು ವಿಸ್ತರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


