ಜಮ್ಮು-ಕಾಶ್ಮೀರದ ರಂಬನ್ ನಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದು ನಾಲ್ವರು ಪ್ರಯಾಣಿಕರು ಸಾವು
ಪ್ರಯಾಣಿಸುತ್ತಿದ್ದ ವಾಹನ ರಸ್ತೆಯಲ್ಲಿ ಜಾರಿ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಎರಡು ವರ್ಷದ ಮಗು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬನಿಹಾಲ್/ಜಮ್ಮು: ಪ್ರಯಾಣಿಸುತ್ತಿದ್ದ ವಾಹನ ರಸ್ತೆಯಲ್ಲಿ ಜಾರಿ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಎರಡು ವರ್ಷದ ಮಗು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಜಮ್ಮುವಿನಿಂದ ಶ್ರೀನಗರಕ್ಕೆ ಬರುತ್ತಿದ್ದ ವಾಹನ ಇಂದು ನಸುಕಿನ ಜಾವ 5.30ರ ಸುಮಾರಿಗೆ ಜಮ್ಮುವಿನ ರಂಬನ್ ಜಿಲ್ಲೆಯ ಖುನಿ ನಲ್ಲ ಸಮೀಪ ಅಪಘಾತ ಸಂಭವಿಸಿದೆ. ಮೃತಪಟ್ಟವರು ಛತ್ತೀಸ್ ಗಢ ಮೂಲದ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಕೂಡಲೇ ದೌಡಾಯಿಸಿದ ಪೊಲೀಸರು, ಮಿಲಿಟರಿ ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಇತರ ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


