ಎಐಎಂಐಎಂ ಮುಖ್ಯಸ್ಥ ಓವೈಸಿ ‘ರಾಜಕೀಯ ಉಗ್ರ’: ಬಿಜೆಪಿ ಶಾಸಕ ಸುರೇಂದ್ರ ಸಿಂಗ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒಬ್ಬ 'ರಾಜಕೀಯ ಉಗ್ರ' ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಬಲ್ಲಿಯಾ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒಬ್ಬ 'ರಾಜಕೀಯ ಉಗ್ರ' ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪೋಸ್ಟ್‌ವೊಂದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಓವೈಸಿ ಒಬ್ಬ ರಾಜಕೀಯ ಭಯೋತ್ಪಾದಕ. ಅವರು ಜನರಿಗೆ ಪ್ರಚೋದನೆ ನೀಡಿ ಸಮಾಜ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಿದ್ದಾರೆ.
‘ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೆ ಎಐಎಂಐಎಂ ನಾಯಕ ಓವೈಸಿಗೆ ಭಾರತದ ಜಾತ್ಯತೀತತೆಯ ಬಗ್ಗೆ ನಂಬಿಕೆ ಇಡಬೇಕು. ಅಸಾದುದ್ದೀನ್ ಓವೈಸಿ ರಾಜಕೀಯ ಉಗ್ರ. ಅವರು ಸಮಾಜದಲ್ಲಿ ಒಡಕು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಪಶ್ಚಿಮ ಬಂಗಾಳವು ಜಮ್ಮು–ಕಾಶ್ಮೀರದ ಹಾದಿಯಲ್ಲಿ ಸಾಗುತ್ತಿದೆ. ಅಲ್ಲಿನ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ’ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


