ಜಮ್ಮು-ಕಾಶ್ಮೀರ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಮಲ್ಹೂರಾ ಹಾಗೂ ಪರಿಂಪೊರಾ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ ವೇಳೆ ಉಗ್ರರ ಬಳಿಯಿದ್ದ ಎರಡು ಎಕೆ 47 ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ರಜೌರಿಯಲ್ಲಿ ಶಸ್ತ್ರಾಸ್ತ್ರಧಾರಿಗಳಿಂದ ಗುಂಡಿನ ದಾಳಿ: ಓರ್ವ ಯೋಧನಿಗೆ ಗಾಯ
ಈ ನಡುವೆ ರಚೌರಿಯ ದಾದಲ್ ಗ್ರಾಮದಲ್ಲಿ ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು ಯೋಧರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


