ಶಶಿಕಲಾ ಬಹುದಿನಗಳಿಂದ ಎಐಎಡಿಎಂಕೆಯೊಂದಿಗೆ ಇಲ್ಲ: ಆಡಿಯೋ ಟೇಪ್ ಬಗ್ಗೆ ಪಳನಿಸ್ವಾಮಿ ಪ್ರತಿಕ್ರಿಯೆ
ಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ.

ಚೆನ್ನೈ: ಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು ಆಧರಿಸಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ. 2017ರಲ್ಲಿ ಉಚ್ಚಾಟನೆಯಾದಾಗಿನಿಂದಲೂ ಅವರು ಪಕ್ಷದೊಂದಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಸೇಲಂನ ಓಮಲೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಶಶಿಕಲಾ ಎಐಎಡಿಎಂಕೆನೊಂದಿಗೆ ಇಲ್ಲ, ಪಕ್ಷದೊಂದಿಗೆ ಸಂಪರ್ಕದಲ್ಲಿಯೂ ಇಲ್ಲ, ಕೇವಲ 10 ಜನರಲ್ಲ, ಸಾವಿರ ಜನರೊಂದಿಗೆ ಆಕೆ ಸಂವಾದ ನಡೆಸಿದರೂ 1.5 ಕೋಟಿ ಕಾರ್ಯಕರ್ತರ ಬಲವಿರುವ ಎಐಎಡಿಎಂಕೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
ಲಸಿಕೆ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದರೂ ಇದನ್ನೇ ಮಾಧ್ಯಮಗಳು ದೊಡ್ಡ ಸಮಸ್ಯೆಯಾಗಿ ಬಿಂಬಿಸುತ್ತಿವೆ ಎಂದು ಹೇಳಿದ ಪಳನಿಸ್ವಾಮಿ, ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಸೇರಿದಂತೆ 505 ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಡಿಎಂಕೆ, ಯಾವುದನ್ನು ಕೂಡಾ ಅನುಷ್ಠಾನ ಮಾಡಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


