ಕೋವಿಡ್ ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಕೋವಿಡ್-19ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ಕ್ಕೆ ಸೂಚಿಸಿದೆ.

ನವದೆಹಲಿ: ಕೋವಿಡ್-19ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ಕ್ಕೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿ, ಕೋವಿಡ್-19 ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನೀಡಬಹುದಾದ ಪರಿಹಾರದ ಮೊತ್ತವನ್ನು ಅಂದಾಜು ಮಾಡಿ ಮಾರ್ಗಸೂಚಿ ಹೊರಡಿಸುವಂತೆ 6 ವಾರಗಳ ಗಡುವನ್ನು ಕೇಂದ್ರ ಸರ್ಕಾರ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 12 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ಶಾಸನಬದ್ಧ ಬಾಧ್ಯತೆಯನ್ನು ಹೊಂದಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಅಂತಹ ಕನಿಷ್ಠ ಪರಿಹಾರವು ಸೆಕ್ಷನ್ 12 ರ ಪ್ರಕಾರ ಎಕ್ಸ್ ಗ್ರೇಷಿಯಾ ನೆರವನ್ನು ಒಳಗೊಂಡಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೆಕ್ಷನ್ 12 ಕಡ್ಡಾಯ ನಿಬಂಧನೆಯಲ್ಲ ಎಂಬ ಕೇಂದ್ರ ಸರ್ಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಸೆಕ್ಷನ್ 12 ಎಂಬ ಪದ ಬಳಕೆಯನ್ನು ಒಪ್ಪಿಕೊಂಡಿದೆ.
ಆದರೆ, ಇಂತಿಷ್ಟೇ ಮೊತ್ತ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ, ಪರಿಹಾರವಾಗಿ ಎಷ್ಟು ಮೊತ್ತ ನೀಡಬಹುದು ಎಂದು ಪರಿಶೀಲಿಸಿ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದೆ.
ಕೋವಿಡ್ ಸಾವುನೋವುಗಳಿಗೆ ಮರಣ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳೀಕರಿಸಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ಹಾಗೂ ಹಣಕಾಸು ಆಯೋಗವು ಪ್ರಸ್ತಾಪಿಸಿದಂತೆ ಶವ ಸಂಸ್ಕಾರಕ್ಕಾಗಿ ವಿಮಾ ಯೋಜನೆಯನ್ನು ರೂಪಿಸಲು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


