ದೇಶ

ಆರ್ ಜೆಡಿ ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೋವಿಡ್ ಗೆ ಬಲಿ

ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಆರ್ ಜೆಡಿ ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೋವಿಡ್ ಗೆ ಬಲಿ
ಮೊಹಮ್ಮದ್‌ ಶಹಾಬುದ್ದಿನ್‌
Published On :

ನವದೆಹಲಿ: ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇಲ್ಲಿನ ತಿಹಾರ್‌ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಕೋವಿಡ್‌ ಸೋಂಕಿಗೆ ಒಳಗಾಗಿದ್ದ ಮೊಹಮ್ಮದ್‌ ಶಹಾಬುದ್ದಿನ್‌ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೈಕೋರ್ಟ್‌ ದೆಹಲಿ ಸರ್ಕಾರಕ್ಕೆ ಶುಕ್ರವಾರ ಸೂಚನೆ ನೀಡಿತ್ತು.

ಶುಕ್ರವಾರ ಸಂಜೆ ಮೊಹಮ್ಮದ್‌ ಶಹಾಬುದ್ದಿನ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2004 ರಲ್ಲಿ ಶಹಾಬುದ್ದಿನ್‌ ತನ್ನ ಸಹಚರರು ಜತೆ ಸೇರಿ ಸಹೋದರರಾದ ಗಿರೀಶ್‌ ಮತ್ತು ಸತೀಶ್‌ ಎಂಬುವರ ಮೇಲೆ ಆ್ಯಸೀಡ್‌ ಸುರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.