ದೇಶ

ಪಶ್ಚಿಮ ಬಂಗಾಳ: ಸಂಜೆಯೊಳಗೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ- ಕೈಲಾಶ್ ವಿಜಯ್ ವರ್ಗೀಯಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳ: ಸಂಜೆಯೊಳಗೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ- ಕೈಲಾಶ್ ವಿಜಯ್ ವರ್ಗೀಯಾ
ಕೈಲಾಶ್ ವಿಜಯ್ ವರ್ಗೀಯಾ
Published On :

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಪ್ರತಿಷ್ಟಿತ ಕಣವಾಗಿದ್ದ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ
ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆರಂಭ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್
 ವಿಜಯ್ ವರ್ಗೀಯಾ, ಇನ್ನೂ ಅನೇಕ ಸುತ್ತುಗಳು ಇರುವುದರಿಂದ ಆರಂಭದಲ್ಲಿ ಏನನ್ನೂ ಹೇಳಲಾಗದು. ಸಂಜೆಯೊಳಗೆ
ಸ್ಪಷ್ಟತೆ ಸಿಗಲಿದೆ. ನಾವು ಮೂರನೇ ಸುತ್ತಿನಿಂದ ಟಿಎಂಸಿಗೆ ಪ್ರಬಲ ಪೈಪೋಟಿ ನೀಡಲು ಶುರು ಮಾಡಿದ್ದೇವೆ. ಸಂಜೆಯೊಳಗೆ
ಮ್ಯಾಜಿಕ್ ನಂಬರ್ ದಾಟಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.