ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ
ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.
ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದರು.
ಇನ್ನು ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


