ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆ
ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

ಭುವನೇಶ್ವರ: ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಅನುಮೋದಿಸಿರುವ ನವೀನ್ ಪಟ್ನಾಯಕ್, ಕಾರ್ಯನಿರತ ಪತ್ರಕರ್ತರು ಅಪಾರ ಸುದ್ದಿಗಳನ್ನು ನೀಡುವ ಮೂಲಕ ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.ಈ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೋವಿಡ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರ ಈ ನಿರ್ಧಾರದಿಂದ ಗೋಪಬಂಧು ಸಾಂಬದಿಕ ಸ್ವಾಸ್ಥ್ಯ ಭೀಮಾ ಯೋಜನೆ ವ್ಯಾಪ್ತಿಗೆ ಬರುವ 6,944 ಕಾರ್ಯನಿರತ ಪತ್ರಕರ್ತರಿಗೆ ಪ್ರಯೋಜನವಾಗಲಿದ್ದು, ತಲಾ 2 ಲಕ್ಷ ರೂ.ಗಳ ಆರೋಗ್ಯ ವಿಮೆ ಸಿಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


