ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!
ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

ಮುಂಬೈ: ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ, 206 ಕ್ಷೇತ್ರಗಳಲ್ಲಿ ಟಿಎಂಸಿ, ಬಿಜೆಪಿ 83 ಕ್ಷೇತ್ರಗಳಲ್ಲಿ ಮುಂದಿದ್ದು, ಟಿಎಂಸಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿಯನ್ನು ಅಭಿನಂದಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಶಿವಸೇನಾ ಮುಖಂಡ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.
ಬಂಗಾಳದ ಹೆಣ್ಣು ಹುಲಿಗೆ ಅಭಿನಂದನೆಗಳು, ಒ ದೀದಿ..ದೀ ಒ ದೀದಿ ಎಂದು ಹೊಗಳಿರುವ ಸಂಜಯ್ ರಾವತ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶಿವಸೇನೆ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಟಿಎಂಸಿಯನ್ನು ಬೆಂಬಲಿಸಿತ್ತು.ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತಿತರರು ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


