ಕಳಪೆ ಸಾಧನೆ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ
ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ.

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರ ರಾಜೀನಾಮೆ ನೀಡಿದ್ದಾರೆ.
ರಾಜ್ಯಸಭೆ ಸದಸ್ಯರಾಗಿರುವ ರಿಪುನ್ ಬೋರ, ಸ್ವತಃ ಗೋಹ್ಪುರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ 29,294 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಹಂಗಾಮಿ ಅಧ್ಯಕ್ಷರಾದ ಸೋನಿಯಾ ಗಾಂಧಿಗೆ ಬೋರ ಪತ್ರ ಬರೆದಿದ್ದು, "ಪಕ್ಷದ ಹೀನಾಯ ಸೋಲಿಗೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೆನೆ" ಎಂದು ಹೇಳಿದ್ದಾರೆ.
"ಅವಿರತ ಶ್ರಮದ ಹೊರತಾಗಿಯೂ ನಾವು ಬಿಜೆಪಿಯ ವಿಭಜನಕಾರಿ ಹಾಗೂ ಕೋಮುವಾದಿ ರಾಜಕಾರಣವನ್ನು ಎದುರಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಹೇಳಲು ಅತ್ಯಂತ ನೋವಾಗುತ್ತಿದೆ" ಎಂದು ರಿಪುನ್ ಬೋರಾ ಪತ್ರದಲ್ಲಿ ತಿಳಿಸಿದ್ದಾರೆ. "ನಾಲ್ಕು ವರ್ಷಗಳಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ ಸಾಧ್ಯವಾದಷ್ಟೂ ಅತ್ಯುತ್ತಮವಾದುದ್ದನ್ನೇ ಮಾಡಿದ್ದೇನೆ" ಎಂದು ರಿಪುನ್ ಬೋರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


