ಸೋಲುಗಳು ಜೀವನದ ಒಂದು ಭಾಗ, ಇಂತಹ ಸೋಲುಗಳನ್ನು ಜೀವನದಲ್ಲಿ ಬಹಳ ನೋಡಿದ್ದೇನೆ: ಕೆ.ಅಣ್ಣಾಮಲೈ
ಸೋಲುಗಳು ಜೀವನದ ಒಂದು ಭಾಗ. ಇಂತಹ ಸೋಲುಗಳನ್ನ ಜೀವನದಲ್ಲಿ ನಾನು ಬಹಳ ನೋಡಿದ್ದೇನೆಂದು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಅಣ್ಣಾಮಲೈ ಅವರು ಹೇಳಿದ್ದಾರೆ.

ಬೆಂಗಳೂರು: ಸೋಲುಗಳು ಜೀವನದ ಒಂದು ಭಾಗ. ಇಂತಹ ಸೋಲುಗಳನ್ನ ಜೀವನದಲ್ಲಿ ನಾನು ಬಹಳ ನೋಡಿದ್ದೇನೆಂದು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಅಣ್ಣಾಮಲೈ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸೋಲುಗಳು ಜೀವನದ ಒಂದು ಭಾಗ. ಇಂತಹ ಸೋಲುಗಳನ್ನ ಜೀವನದಲ್ಲಿ ನಾನು ಬಹಳ ನೋಡಿದ್ದೇನೆ. ಗೆಲ್ಲಬೇಕೆಂದು ಬಯಸಿದ್ದೆ. ಆದರೆ, ಗೆಲುವಿನ ರೇಖೆಯನ್ನು ದಾಟುವುದಕ್ಕೆ ಆಗಲಿಲ್ಲ. ಅರವಕುರುಚಿ ಕ್ಷೇತ್ರದ ಮತದಾರರಿಗೆ ಧನ್ಯವಾದಗಳು. 68 ಸಾವಿರ ಮತ ನೀಡಿದ ಮತದಾರರಿಗೆ ಧನ್ಯವಾದಗಳೆಂದು ಹೇಳಿದ್ದಾರೆ.
ಐಪಿಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಸಿಗಂ ಎಂದೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ ಅವರು, ಐಪಿಎಸ್ ತೊರೆದು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ತಮಿಳು ನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


