ಫೆ.24ರ ಒಪ್ಪಂದದ ನಂತರ ಇದೇ ಮೊದಲ ಬಾರಿಗೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರಿಂದ ಗುಂಡಿನ ದಾಳಿ
ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ: ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಸೋಮವಾರ ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿ ಬಿಎಸ್‌ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಿಗ್ಗೆ 6.15 ರ ಸುಮಾರಿಗೆ ಪಾಕಿಸ್ತಾನ ರೇಂಜರ್ಸ್ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ರಾಮಗರ್ ಸೆಕ್ಟರ್‌ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯ ಯೋಧರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.
ಫೆಬ್ರವರಿ 25ರಂದು ಭಾರತ ಮತ್ತು ಪಾಕಿಸ್ತಾನಗಳು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತಮ್ಮ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ, ನವೆಂಬರ್ 2003ರ ಗಡಿ ಕದನ ವಿರಾಮ ಒಪ್ಪಂದವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಭಯ ದೇಶಗಳು ಸಮ್ಮತಿಸಿದ್ದವು ಎಂದು ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


