ರಾಜಕೀಯ ಕಾರಣಕ್ಕೆ 'ಜೈ ಶ್ರೀರಾಮ್' ಬಳಕೆಯಿಂದ ಬಂಗಾಳದಲ್ಲಿ ಬಿಜೆಪಿಗೆ ಸೋಲು: ಕಪಿಲ್ ಸಿಬಲ್
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಟಿಎಂಸಿ ಹಾಗೂ ಮೂರನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಸೋಮವಾರ ಅಭಿನಂದಿಸಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಟಿಎಂಸಿ ಹಾಗೂ ಮೂರನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಸೋಮವಾರ ಅಭಿನಂದಿಸಿದ್ದಾರೆ.
ಟಿಎಂಸಿಯ ಗೆಲುವು ಕುರಿತಂತೆ ಟ್ವೀಟ್ ಮಾಡಿರುವ ಅವರು, ದುರಂಹಕಾರ, ತೋಳ್ಬಲ, ಹಣಬಲ ಮತ್ತು ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿದ್ದರಿಂದ ಬಿಜೆಪಿ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದಿದ್ದಾರೆ.
ವಿಭಜನೆಯ ಸಿದ್ದಾಂತ ಮತ್ತು ಚುನಾವಣಾ ಆಯೋಗ ಬಳಕೆಯಿಂದಲೂ ಸಹ ಬಿಜೆಪಿ ಸೋಲು ಅನುಭವಿಸುವಂತಾಗಿದೆ.
ಅವೆಲ್ಲವನ್ನೂ ಮೆಟ್ಟಿ ನಿಂತು ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


