ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ನಿಧನ: ಪ್ರಧಾನಿ ಮೋದಿ ಸಂತಾಪ
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ಅವರು ಮಂಗಳವಾರ ವಿಧಿವಶರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ಅವರು ಮಂಗಳವಾರ ವಿಧಿವಶರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಜಗಮೋಹನ್ ಜೀ ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ. ಜಗಮೋಹನ್ ಅವರು ಪ್ರಸಿದ್ಧ ವಿದ್ವಾಂಸರಾಗಿದ್ದರು. ಸದಾಕಾಲ ಭಾರತದ ಸುಧಾರಣೆಗೆ ಶ್ರಮಿಸಿದರು. ಅವರ ಅಧಿಕಾರಾವಧಿಯನ್ನು ನವೀನ ರೀತಿಯ ನೀತಿಗಳನ್ನು ರೂಪಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ... ಎಂದು ಹೇಳಿದ್ದಾರೆ.
1927ರ ಸೆಪ್ಟೆಂಬರ್ 25 ರಂದು ಜಗಮೋಹನ್ ಮಲ್ಹೋತ್ರಾ ಅವರು ಜನಿಸಿದ್ದು, ತಮ್ಮ ವೃತ್ತಿಜೀವನದಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಜಮ್ಮು ಮತ್ತು ಕಾಶ್ರೀರ ಮತ್ತು ಗೋವಾದ ರಾಜ್ಯಪಾಲರು ಹಾಗೂ ದೆಹಲಿ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


