ಜಮ್ಮು ಮತ್ತು ಕಾಶ್ಮೀರ: ಸೇನಾ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ, ಮುಂದುವರೆದ ಕಾರ್ಯಾಚರಣೆ
ಕಣಿವೆ ರಾಜ್ಯ ಜಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮೇಲೆ ಮುಗಿ ಬಿದ್ದ ಸೇನಾಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.

ಶ್ರೀನಗರ: ಕಣಿವೆ ರಾಜ್ಯ ಜಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮೇಲೆ ಮುಗಿ ಬಿದ್ದ ಸೇನಾಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.
ಜಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯ ನಾಥಿಪೋರಾ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಕಳೆದ ತಿಂಗಳು ಇದೇ ಸೋಪೋರ್ ನಲ್ಲಿ ಇಬ್ಬರು ಕೌನ್ಸಿಲರ್ ಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿಯನ್ನು ಉಗ್ರರು ಹತ್ಯೆಗೈದಿದ್ದರು. ದಾಳಿ ನಡೆಸಿದ್ದ ಉಗ್ರರ ಗುಂಪಿನಲ್ಲಿ ಓರ್ವ ವಿದೇಶ ಉಗ್ರ ಕೂಡ ಇದ್ದ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದವು. ಇದೇ ಘಟನೆ ಕುರಿತಂತೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳಿಗೆ ಉಗ್ರರ ಇರುವಿಕೆ ಕುರಿತು ಮಾಹಿತಿ ತಿಳಿದುಬಂದಿತ್ತು. ಈ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಸೇನಾಪಡೆಗಳು ಸೋಪೋರ್ ಜಿಲ್ಲೆಯ ನಾಥಿಪೋರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ಅಂತೆಯೇ ಘಟನಾ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸಮೀಪದ ಸುತ್ತಮುತ್ತಲ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಂತೆಯೇ ನಾಕಾಬಂದಿ ಹೇರಿ ಉಗ್ರರು ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


