ಕೋವಿಡ್-19 ತಡೆಗೆ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್: ರಾಹುಲ್ ಗಾಂಧಿ
ದೇಶದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೊರೋನಾವೈರಸ್ ಹರಡದಂತೆ ತಡೆಯುವಲ್ಲಿ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಎಂದಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೊರೋನಾವೈರಸ್ ಹರಡದಂತೆ ತಡೆಯುವಲ್ಲಿ ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಎಂದಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದ ಅನೇಕ ಅಮಾಯಕ ಜನರು ಬಲಿಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಕೋವಿಡ್ -19 ಸೋಂಕು ಹರಡದಂತೆ ಈಗ ಇರುವ ಏಕೈಕ ಮಾರ್ಗ,ದುರ್ಬಲ ವರ್ಗಗಳಿಗೆ ನ್ಯಾಯ ರಕ್ಷಣೆಯೊಂದಿಗೆ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿದೆ. ಅನೇಕ ಅಮಾಯಕ ಜನರು ಸಾಯುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಳೆದ ತಿಂಗಳು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೂಕ್ಷ್ಮ ಕಂಟೈನ್ ಮೆಂಟ್ ವಲಯದತ್ತ ಗಮನ ಹರಿಸಿ. ಕೊನೆಯ ಮಾರ್ಗವಾಗಿ ಲಾಕ್ ಡೌನ್ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


