ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಹಾಸ್ಯನಟಿ ಸುಗಂಧ ಮಿಶ್ರಾ, ಇತರರ ವಿರುದ್ಧ ಕೇಸ್ ದಾಖಲು
ಹಾಸ್ಯನಟಿ ಸುಗಂಧ ಮಿಶ್ರಾ ಅವರು ಕಳೆದ ವಾರ ಇಲ್ಲಿನ ರೆಸಾರ್ಟ್ ವೊಂದರಲ್ಲಿ ಹಾಸ್ಯನಟ ಸಂಕೇತ್ ಭೋಸಲೆ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ....

ಫಗ್ವಾರಾ: ಹಾಸ್ಯನಟಿ ಸುಗಂಧ ಮಿಶ್ರಾ ಅವರು ಕಳೆದ ವಾರ ಇಲ್ಲಿನ ರೆಸಾರ್ಟ್ ವೊಂದರಲ್ಲಿ ಹಾಸ್ಯನಟ ಸಂಕೇತ್ ಭೋಸಲೆ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ನಟಿ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಹೆಚ್ಚಿನ ಜನರು ಭಾಗವಹಿಸಿದ ವಿಡಿಯೋ ವೈರಲ್ ಆದ ನಂತರ ಸುಗಂಧ ಮಿಶ್ರಾ ಹಾಗೂ ವರನ ಕಡೆಯವರು, ರೆಸಾರ್ಟ್ ಮಾಲೀಕರು ಮತ್ತು ಮದುವೆಯಲ್ಲಿ ಭಾಗವಹಿಸಿದವರ ವಿರುದ್ಧ ಬುಧವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪರಮ್‌ಜಿತ್ ಸಿಂಗ್ ಹೇಳಿದ್ದಾರೆ.
ಏಪ್ರಿಲ್ 26 ರಂದು ಈ ಮದುವೆ ಸಮಾರಂಭ ನಡೆದಿತ್ತು.
ಭಾರತೀಯ ದಂಡ ಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 188 ಅಡಿಯಲ್ಲಿ ಕೇಸ್ ದಾಖಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಜಲಂಧರ್ ಮೂಲದ ಮಿಶ್ರಾ ಹಾಗೂ ಮಹಾರಾಷ್ಟ್ರ ಮೂಲದ ಭೋಸಲೆ ಇಬ್ಬರೂ 'ದಿ ಕಪಿಲ್ ಶರ್ಮಾ ಶೋ' ಮೂಲಕ ಖ್ಯಾತಿ ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


