ಕೋವಿಡ್ ಲಸಿಕೆ: ಭಾರತ್ ಬಯೋಟೆಕ್‌ಗೆ 1104.78 ಕೋಟಿ ರೂ. ಪಾವತಿ - ಅನುರಾಗ್ ಠಾಕೂರ್
ದೇಶದಲ್ಲಿ ಕೋವಿಡ್ ಲಸಿಕೆ ಉತ್ಪಾದಿಸುವ ಕಂಪನಿಗೆ ನೀಡಬೇಕಾದ ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆ ಉತ್ಪಾದಿಸುವ ಕಂಪನಿಗೆ ನೀಡಬೇಕಾದ ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿ. ಕಂಪನಿಗೆ ಇಲ್ಲಿಯವರೆಗೆ ಒಟ್ಟು 1104.78 ಕೋಟಿ ರೂ. ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿ. ಕಂಪನಿಯಿಂದ ಒಟ್ಟು 8 ಕೋಟಿ ಕೋವಿಡ್ ಲಸಿಕೆಯ ಡೋಸ್ ಗಳನ್ನು ಆರ್ಡರ್ ಮಾಡಲಾಗಿತ್ತು. ಅದರಲ್ಲಿ ಇಲ್ಲಿಯವರೆಗೆ 1.8813 ಕೋಟಿ ಡೋಸ್ ಗಳನ್ನು ಪೂರೈಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಲಸಿಕೆಗಳಿಗೆ ಒಟ್ಟು 342.28 ಕೋಟಿ ರೂ. ದರದ ಬಿಲ್ ನೀಡಲಾಗಿತ್ತು. ಸರ್ಕಾರ ಇಲ್ಲಿಯವರೆಗೆ 1104.78 ಕೋಟಿ ರೂ. ಪಾವತಿಸಿದೆ. ಇದು 2021ರ ಮೇ, ಜೂನ್, ಜುಲೈ ತಿಂಗಳುಗಳಲ್ಲಿ ಪೂರೈಕೆಯಾಗುವ ಲಸಿಕೆಗಳ ದರವನ್ನು ಕೂಡ ಒಳಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


