ದೇಶ

ಗುಜರಾತ್: ಕೋವಿಡ್-19 ನಿರ್ಮೂಲನೆ ಪೂಜೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಜನರ ಬಂಧನ

ಕೊರೋನಾವೈರಸ್ ನಿಮೂರ್ಲನೆಗಾಗಿ ಗುಜರಾತಿನ ಗಾಂಧಿನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೆಲ ದಿನಗಳಲ್ಲಿ ಗುಜರಾತಿನಲ್ಲಿ ಇಂತಹ ಎರಡನೇ ಘಟನೆ ನಡೆದಿದೆ.

ಗುಜರಾತ್: ಕೋವಿಡ್-19 ನಿರ್ಮೂಲನೆ ಪೂಜೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಜನರ ಬಂಧನ
ಸಾಂದರ್ಭಿಕ ಚಿತ್ರ
Published On :

ಅಹಮದಾಬಾದ್: ಕೊರೋನಾ ವೈರಸ್ ನಿಮೂರ್ಲನೆಗಾಗಿ ಗುಜರಾತಿನ ಗಾಂಧಿನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೆಲ ದಿನಗಳಲ್ಲಿ ಗುಜರಾತಿನಲ್ಲಿ ಇಂತಹ ಎರಡನೇ ಘಟನೆ ನಡೆದಿದೆ.

ಗಾಂಧಿನಗರದ ರಾಯಪುರ ಹಳ್ಳಿಯಲ್ಲಿ ಬುಧವಾರ ನಡೆದ ಹೊಸದಾದ ಮೆರವಣಿಗೆ ವೇಳೆ ಎಲ್ಲಾ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಡಿಎಸ್ ಪಿ ಎಂ.ಕೆ. ರಾಣಾ ತಿಳಿಸಿದ್ದಾರೆ.

ಈ ಮೆರವಣಿಗೆಯ ದೃಶ್ಯ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುಮಾರು 100 ಪುರುಷರು ಹಾಗೂ ಮಹಿಳೆಯರು ಮಾಸ್ಕ್ ಧರಿಸಿದೆ ಮೆರವಣಿಯಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದೆ.ಡ್ರಮ್ ಬಾರಿಸಿಕೊಂಡು ಕೆಲ ಪುರುಷರು ಮೆರವಣಿಗೆ ನಡೆಸುತ್ತಿದ್ದರೆ ಮಹಿಳೆಯರು ತಲೆ ಮೇಲೆ ಕುಂಭ ಹೊತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ನಂತರ ಮೆರವಣಿಗೆಯಲ್ಲಿ ತೊಡಗಿದ್ದ 46 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಣಾ ಮಾಹಿತಿ ನೀಡಿದ್ದಾರೆ.

ತಮ್ಮ ಊರಿನಲ್ಲಿರುವ ದೇವರ ಮೇಲೆ ನೀರು ಸುರಿದರೆ ಕೊರೋನಾವೈರಸ್ ನಿರ್ಮೂಲನೆಯಾಗಲಿದೆ ಎಂಬ ಕೆಲ ಜನರ ನಂಬಿಕೆಯಿಂದ ಈ ಮೆರವಣಿಗೆ ನಡೆಸಲಾಗಿದೆ. ಎಲ್ಲ 46 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಮೇ 3 ರಂದು ಅಹಮದಾಬಾದಿನ ನವಪುರ ಗ್ರಾಮದಲ್ಲಿಯೂ ಇದೇ ರೀತಿಯ ಮೆರವಣಿಗೆ  ನಡೆಸಲಾಗಿತ್ತು, ಈ ಘಟನೆ ಸಂಬಂಧ 23 ಜನರನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.