ದೇಶ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ: 24 ಗಂಟೆಗಳಲ್ಲಿ 4,12,262 ಹೊಸ ಪ್ರಕರಣಗಳು, 3,980 ಸಾವು

ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಪ್ರತಿನಿತ್ಯವೂ ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ: 24 ಗಂಟೆಗಳಲ್ಲಿ 4,12,262 ಹೊಸ ಪ್ರಕರಣಗಳು, 3,980 ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಪ್ರತಿನಿತ್ಯವೂ ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ನಿನ್ನೆ ಒಂದೇ ದಿನ 4 ಲಕ್ಷದ 12 ಸಾವಿರದ 262 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿಯ 10 ಲಕ್ಷದ 77 ಸಾವಿರದ 410ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3 ಸಾವಿರದ 980 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 23 ಲಕ್ಷದ 01 ಸಾವಿರದ 68ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷದ 66 ಸಾವಿರದ 398ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 3 ಲಕ್ಷದ 29 ಸಾವಿರದ 113 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1 ಕೋಟಿಯ 72 ಲಕ್ಷದ 80 ಸಾವಿರದ 844ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 19 ಲಕ್ಷದ 23 ಸಾವಿರದ 131 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29 ಕೋಟಿಯ 67 ಲಕ್ಷದ 75 ಸಾವಿರದ 209 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.