ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದರ ಜೊತೆಗೆ ಸ್ಥಳೀಯ ಪರಿಸ್ಥಿತಿಯ ಬಗ್ಗೆ ಕೂಡ ಈ ಸಮಿತಿ ವರದಿ ನೀಡಲಿದೆ.
ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಣೆ ಮಾಡಲಿದ್ದು, ಸಮಿತಿಯ ಸದಸ್ಯರು ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಮೇ.05 ರಂದು ಗೃಹ ಸಚಿವಾಲಯ ರಾಜ್ಯಕ್ಕೆ ವರದಿ ಸಲ್ಲಿಸುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದರೆ ಅದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವನೋತ್ತರ ಗಲಭೆಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ ಬೆಂಬಲಿತ ಗೂಂಡಾಗಳು ಹತ್ಯೆ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ. 14 ಮಂದಿ ಬಿಜೆಪಿ ಕಾರ್ಯಕರ್ತರನ್ನು ಈ ವರೆಗೂ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


