ಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿ
ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕೊಲ್ಕತ್ತಾ: ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ತಮ್ಮ ಬೆಂಗಾವಲು ವಾಹನದ ಮೇಲಿನ ದಾಳಿ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಿ ಮುರಳೀಧರನ್ ಟ್ವೀಟ್ ಮಾಡಿದ್ದಾರೆ.
ಹಿಂಸಾಚಾರದ ವೇಳೆ ದಾಳಿಗೊಳಗಾಗಿದ್ದ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಪಶ್ಚಿಮ ಮಿಡ್ನಾಪುರಕ್ಕೆ ಹೋಗಿದ್ದೆ. ತಮ್ಮ ಬೆಂಗಾವಿನೊಂದಿಗೆ ಒಂದು ಮನೆಯಿಂದ ಮತ್ತೊಂದು ಮನೆಗೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಎದುರಾದ ಗುಂಪೊಂದು ನಮ್ಮ
ಮೇಲೆ ಗಲಾಟೆ ಮಾಡಿ, ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುರಳೀಧರನ್ ಹೇಳಿದ್ದಾರೆ.
ನಾನು ಸುರಕ್ಷಿತವಾಗಿದ್ದೇನೆ. ಆದರೆ, ಕಾರು ಚಾಲಕನಿಗೆ ಗಾಯವಾಗಿದೆ. ಕೆಲ ಕಾರುಗಳ ಕಿಟಕಿಗಳನ್ನು ಹೊಡೆದು ಹಾಕಲಾಗಿದೆ ಎಂದು ಸಚಿವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿಯೇ ದಾಳಿ ನಡೆದಿದೆ ಎಂದು ಸಚಿವರ ಜೊತೆಗಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ.ಈ ಘಟನೆ ಸಂಬಂಧ ತನಿಖೆ ನಡೆಸಲಾಗುವುದು.ಆದರೆ, ಈವರೆಗೂ ಯಾರನ್ನೂ ಬಂದಿಸಿಲ್ಲ ಎಂದು ಪಶ್ಚಿಮ
ಮಿಡ್ನಾಪುರದ ಕೊತ್ವಾಲಿ ಠಾಣಾಧಿಕಾರಿಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


